ಮಹಿಳಾ ಪೊಲೀಸ್ ಸಿಬ್ಬಂದಿ ಸಾವಿಗೆ ಶರಣು

Picture of RB NEWS

RB NEWS

Bureau Report

ಉಡುಪಿ :ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ವಸತಿಗೃಹದಲ್ಲಿ ನೇಣಿ ಬಿಗಿದು ಬದುಕಿಗೆ ಅಂತ್ಯ ಹೇಳಿದ್ದಾರೆ.

ಬಾಗಲಕೋಟೆ ಮೂಲದ ಜ್ಯೋತಿ (29) ಆತ್ಮಹತ್ಯೆ ಗೈದ ಮಹಿಳಾ ಪೊಲೀಸ್ ಸಿಬ್ಬಂದಿ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿ ವಸತಿಗೃಹಕ್ಕೆ ತೆರಳಿದ ಅವರು ಆತ್ಮಹತ್ಯೆಗೈದಿದ್ದಾರೆ.

ಮೃತ ಮಹಿಳಾ ಪೊಲೀಸ್ ಸಿಬ್ಬಂದಿ ಜ್ಯೋತಿಯವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದಾರೆ. ಕರ್ತವ್ಯಕ್ಕೆಂದು ಮನೆಯಿಂದ ಹೊರಟು ಹೋಗಲು ಸಿದ್ಧತೆ ನಡೆಸುತ್ತಿದ್ದಾಗ ಪತ್ನಿ ಆತ್ಮಹತ್ಯೆಗೈದಿರುವುದು ಗಮನಕ್ಕೆ ಬಂದಿದೆ ಎಂದು ತಿಳಿದುಬಂದಿದೆ.

ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top