ರಾಷ್ಟ್ರಪತಿ ಭವನದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಡಾ. ಆನಂದ ಸಂಕೇಶ್ವರ, ವಾಣಿ ಸಂಕೇಶ್ವರ

Picture of RB NEWS

RB NEWS

Bureau Report


ನವದೆಹಲಿ: ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಧಿಕೃತ ನಿವಾಸವಾದ ರಾಷ್ಟ್ರಪತಿ ಭವನದಲ್ಲಿ ಜ.26ರಂದು ಆಯೋಜಿಸಿದ್ದ ‘ಅಟ್ ಹೋಮ್’ ಸ್ವಾಗತ ಸಮಾರಂಭದಲ್ಲಿ ವಿಆರ್‌ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಹಾಗೂ ವಿಆರ್‌ಎಲ್ ಮೀಡಿಯಾ ನಿರ್ದೇಶಕಿ ವಾಣಿ ಸಂಕೇಶ್ವರ ಅವರು ಪಾಲ್ಗೊಂಡಿದ್ದರು.
ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ಈ ಗಣ್ಯರ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಅಲ್ಲದೇ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೊನಿಯೋ ಕೋಸ್ಟಾ, ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡರ್ ಲೇಯನ್, ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಎಸ್. ಜೈಶಂಕರ್ ಸೇರಿದಂತೆ ದೇಶ-ವಿದೇಶಗಳ ವಿವಿಧ ಕ್ಷೇತ್ರಗಳ ಗಣ್ಯರು ಈ ಸಮಾರಂಭದಲ್ಲಿ
ಭಾಗವಹಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top