ಕರಾವಳಿ ಜಿಲ್ಲೆಯನ್ನು ನಿರ್ಲಕ್ಷಿಸಿದ ಕೇಂದ್ರ ಬಜೆಟ್: ಉದಯ ಶೆಟ್ಟಿ ಮುನಿಯಾಲು

Picture of RB NEWS

RB NEWS

Bureau Report


ಕಾರ್ಕಳ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಕರಾವಳಿ ಜಿಲ್ಲೆಗಳಿಗೆ ತೀವ್ರ ನಿರಾಸೆಯನ್ನು ಉಂಟುಮಾಡಿದೆ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯಪಟ್ಟಿದ್ದಾರೆ.
ಬಜೆಟ್ ಕುರಿತು ಪ್ರಕಟಣೆ ನೀಡಿರುವ ಅವರು, ಇದು ಜನಸಾಮಾನ್ಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡ ಬಜೆಟ್ ಅಲ್ಲದೆ, ಕೇವಲ ಚುನಾವಣಾ ಉದ್ದೇಶದಿಂದ ರೂಪಿಸಲಾದ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ. ಬಿಜೆಪಿ ಅಧಿಕಾರವಿಲ್ಲದ ರಾಜ್ಯಗಳಲ್ಲಿ ಪಕ್ಷ ಬಲವರ್ಧನೆಗಾಗಿ ಮಾತ್ರ ಈ ಬಜೆಟ್ ಮಂಡಿಸಿರುವಂತೆ ಕಾಣುತ್ತದೆ. ಈ ಬಜೆಟ್‌ನಿಂದ ಸಾಮಾನ್ಯ ಜನರಿಗೆ ಯಾವುದೇ ಸ್ಪಷ್ಟ ಪ್ರಯೋಜನವಿಲ್ಲ ಎಂದು ಅವರು ತಿಳಿಸಿದ್ದಾರೆ.
ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಸಂಸದರೇ ಪ್ರತಿನಿಧಿಸುತ್ತಿದ್ದರೂ ಸಹ, ಕರಾವಳಿಯ ನೈಜ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಜನತೆಯ ಅಗತ್ಯಗಳು ಮತ್ತು ಬೇಡಿಕೆಗಳಿಗೆ ಸ್ಪಂದಿಸಿ ಸಮತೋಲನದ ಹಾಗೂ ಅಭಿವೃದ್ಧಿ ಪರವಾದ ಬಜೆಟ್ ನೀಡಬೇಕಾಗಿದ್ದ ಕೇಂದ್ರ ಸರ್ಕಾರ, ತನ್ನ ಪಕ್ಷದ ಚುನಾವಣಾ ಲಾಭಕ್ಕೆ ಮಾತ್ರ ಸೀಮಿತವಾದ ಬಜೆಟ್ ನೀಡಿದೆ ಎಂದು ಅವರು ಹೇಳಿದರು.
ಜನತೆಯ ಹಿತದೃಷ್ಟಿಯಿಂದ ನೋಡಿದರೆ ಇದು ಸಂಪೂರ್ಣ ನಿರಾಸಾದಾಯಕ ಬಜೆಟ್ ಆಗಿದ್ದು, ಕರಾವಳಿ ಭಾಗದ ಜನರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಉದಯ ಶೆಟ್ಟಿ ಮುನಿಯಾಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top