[t4b-ticker]

ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು

Picture of RB NEWS

RB NEWS

Bureau Report

ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ಬಾಡಿ ಬಿಲ್ಡರ್ ಒಬ್ಬರು ಜಿಮ್ ವ್ಯಾಯಮ ಮುಗಿಸಿ ಮನೆಗೆ ಬಂದ ಕೆಲ ಹೊತ್ತಿನಲ್ಲಿಯೆ ದಿಢೀರಾಗಿ ನೆಲಕ್ಕೆ ಕುಸಿದು ಬಿದ್ದು ಕೊನೆಯುಸಿರೆಳೆದ ಆಘಾತಕಾರಿ ಘಟನೆ ದಾವಣಗೆರೆಯ ಕೆ.ಟಿ.ಜಂಬಣ್ಣನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕೆಟಿಜೆ ನಗರದ ನಿವಾಸಿ ಸುಶೀಲ್ ಕುಮಾರ್ .ಅವರಿಗೆ 26 ವರ್ಷ ವಯಸ್ಸಾಗಿತ್ತು.
ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿ ಗಳಿಸಿದ್ದ ಇವರು ಅಂತಾರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ವೇದಿಕೆಗಳಿಗೆ ರೆಡಿಯಾಗುತ್ತಿದ್ದರು. ಈ ನಡುವೆ ಸುಶೀಲ್ ಕುಮಾರ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಹೃದಯಾಘಾತದ ಕಾರಣವೆನ್ನುವ ಶಂಕೆ ವ್ಯಕ್ತವಾಗಿದೆ.
ಕಳೆದ ದಿನ ರಾತ್ರಿ 8-30 ಈ ಘಟನೆ ನಡೆದಿದ್ದು, ಜಿಮ್ ಮುಗಿಸಿಕೊಂಡು ಸುಶೀಲ್ ಮನೆಗೆ ಬಂದಿದ್ದರು. ತಲೆ ಸುತ್ತುತ್ತಿರುವುದಾಗಿ ಹೇಳಿದ ಕೆಲವೇ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ರಕ್ತದೊತ್ತಡ ಕಡಿಮೆಯಾಗಿ (ಲೋ ಬಿಪಿ) ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ವೈದ್ಯರು ಹೇಳಿದ್ದಾರೆ.

ನಿತ್ಯ ಹತ್ತಾರು ಯುವಕರಿಗೆ ತರಬೇತಿ ನೀಡುತ್ತಿದ್ದ ಸುಶೀಲ್ ಅವರನ್ನು ಕಳೆದುಕೊಂಡು ಸ್ನೇಹಿತರು ಕಣ್ಣೀರಿಟ್ಟಿದ್ದಾರೆ.
ಸುಶೀಲ್ ಕುಮಾರ್ ಅವರ ತಾಯಿ ದೇವಮ್ಮ ಜಿಲ್ಲಾಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕೆಲಸ ಮಾಡುತ್ತಿರುವವರಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top