ಕಾರ್ಕಳ: ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ.

ಕಾರ್ಕಳ: ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತರು ಎಂದು ಗುರುತಿಸಲಾಗಿದೆ.
ಕಾರ್ಕಳ ನಿಟ್ಟೆ ಬ್ರಹ್ಮರಿ ಕ್ರಾಸ್ ಸಮೀಪ ಈ ಘಟನೆ ಸಂಭವಿಸಿದೆ. ಲಾರಿಯಲ್ಲಿ ಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಕೋರೆಯ ಪಕ್ಕದ ಇಳಿಜಾರು ರಸ್ತೆಯಲ್ಲಿ ಲಾರಿ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡೆದಿದೆ. ಈ ವೇಳೆ ಕಾರ್ಮಿಕರಿಬ್ಬರು ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸುದಾಖಲಾಗಿದೆ.