ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
RB NEWS
Bureau Report
ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅಗಮಿಸಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ ಅಪಾಯಕಾರಿ ಸ್ಫೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ದಿಡುಪೆ ಹಾಗೂ ಶಶಿರಾಜ್ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಮೇ 18ರಂದು ರಾತ್ರಿ ಪೊಲೀಸರು ಬಂಧಿಸಿದ್ದರು.
ಇದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಲಾಗಿದೆ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಅಗ್ರಹಿಸಿ ಬೆಳ್ತಂಗಡಿ ಠಾಣೆಯ ಎದುರು ಪ್ರತಿಭಟನೆ ನಡೆಸಿ ಸ್ಥಳದಲ್ಲಿ ಕುಳಿತು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಸರ್ಕಾರಿ ಕರ್ತವ್ಯ ಅಡ್ಡಿಪಡಿಸಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.