ಬೆಳ್ತಂಗಡಿ ಪೊಲೀಸ್‌ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

Picture of RB NEWS

RB NEWS

Bureau Report

ಪೊಲೀಸ್ ಇಲಾಖೆ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್‌ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸ್ ಇಲಾಖೆ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್‌ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್‌ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವ ಬೆದರಿಕೆ ಒಡ್ಡಿರುವ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರೌಡಿ ಶೀಟ‌ರ್ ಶಶಿರಾಜ್ ಶೆಟ್ಟಿಯ ಬಂಧನ ವಿರೋಧಿಸಿ ಬೆಳ್ತಂಗಡಿ ವಿಕಾಸ ಸೌಧದ ಎದುರು ಸೋಮವಾರ ಶಾಸಕ ಹರೀಶ್‌ ಪೂಂಜ ನೇತೃತ್ವದಲ್ಲಿ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಲಾಗಿತ್ತು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top