ಬೆಳ್ತಂಗಡಿ ಪೊಲೀಸರಿಗೆ ಶರಣಾದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ದಿನವಿಡೀ ನಡೆದ ಹೈ ಡ್ರಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

ಶಾಸಕರ ಮನೆ ಮುಂದೆ ದಿನವಿಡೀ ಪೊಲೀಸರು ಕಾದರೂ ಕಾರ್ಯಕರ್ತರು ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ತಕ್ಷಣ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಹಿಂತಿರುಗುದ್ದರು. ಇದೀಗ 9.30ರ ಸುಮಾರಿಗೆ ಶಾಸಕ ಹರೀಶ್ ಪೂಂಜ ಅವರು ಸ್ವತಹ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಶರಣಾಗಿದ್ದಾರೆ.
ಜಾಮೀನಿನ ಮೇರೆಗೆ ಬಿಡುಗಡೆ
ಪ್ರತಿಭಟನೆ ಸಭೆಯಲ್ಲಿ ಪೊಲೀಸರಿಗೆ ನಿಂದಿಸಿ ಜೀವ ಬೆದರಿಕೆ ಹಾಕಿದ, ಹಾಗೂ ಠಾಣೆಗೆ ನುಗ್ಗಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ತಿಳಿದುಬಂದಿದೆ.






















