ಕರ್ನಾಟಕಕ್ಕಾಗಿ ನಾವು : 13 ದಿನಗಳ 3000 ಕಿ.ಮೀಟರ್ ಗಳ ಬೈಕ್ ಜಾಥಾ

Picture of RB NEWS

RB NEWS

Bureau Report

ಬೆಂಗಳೂರು: ದೇವನಹಳ್ಳಿಯಲ್ಲಿ ಪ್ರಾರಂಭವಾದ ಬೈಕ್ ಜಾಥಾವು ಮಧ್ಯಾಹ್ನ ಹೊತ್ತಿಗೆ ಉಡುಪಿ ನಗರ ತಲುಪಿತ್ತು.

ರಾಜ್ಯ ಜಂಟಿ ಕಾರ್ಯದರ್ಶಿ ರಘುಪತಿ ಭಟ್ ರವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ
ತಮ್ಮ ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಬೇಕೆಂದರು.

ಸ್ವಚ್ಚ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಬೈಕ್ ಜಾಥಾ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಈ ಜಾಥಾದ ಸಂದರ್ಭದಲ್ಲಿ “ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆ.ಸಿ.ಬಿ. ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ತಮ್ಮ ಮತ್ತು ತಮ್ಮ ಮಕ್ಕಳ ರಾಜಕೀಯ ನಾಯಕರೆಂದು ಒಪ್ಪಿಕೊಳ್ಳದೆ ಜನಪರ ಕಾಳಜಿಯ, ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಡಪ್ರೇಮಿ ಸೈನಿಕರನ್ನು ಮತ್ತು KRS ಪಕ್ಷವನ್ನು ಬೆಂಬಲಿಸಿ” ಎಂದು KRS ಪಕ್ಷದ ರಾಜ್ಯಧ್ಯಕ್ಷ ರವಿ ಕೃಷ್ಣಾರೆಡ್ಡಿ ಮನವಿ ಮಾಡಿದರು.

“ನಾಡಪ್ರೇಮಿಗಳೇ, ಏಳಿ, ಎದ್ದೇಳಿ! ಭ್ರಷ್ಟ ವ್ಯವಸ್ಥೆಯನ್ನು ತೊಲಗಿಸಿ, ಭವ್ಯ ಸಮಾಜವನ್ನು ನಿರ್ಮಿಸಿ. ಹೆಮ್ಮೆ ಮತ್ತು ಘನತೆಯಿಂದ ಜೀವಿಸಿ, ಸ್ವಾಭಿಮಾನದಿಂದ ಬದುಕಿ, ಬಾಳಿ” ಎಂದು ಕರೆ ನೀಡಿದರು.

ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಉಪಧ್ಯಕ್ಷ ಲಿಂಗೇಗೌಡ ಎಸ್. ಹೆಚ್., ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ. ಎನ್., ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಚಂದ್ರಶೇಖರ್ ಮಠದ, ಬಿ. ಜಿ. ಕುಂಬಾರ, ಪ್ರವೀಣ್, ಜಿಲ್ಲಾಧ್ಯಕ್ಷ ಸದಾಶಿವ, ಕಾರ್ಯಕಾರಿ ಸಮಿತಿ ಸದಸ್ಯ ಇಕ್ಬಾಲ್ ಹಾಗೂ ಇತರ ಪದಾಧಿಕಾರಿಗಳು ಈ ಬೈಕ್ ಜಾಥಾ ದಲ್ಲಿ ಭಾಗವಹಿಸಿದ್ದಾರೆ.

ವರದಿ: ಎಲ್. ಜೀವನ್
ರಾಜ್ಯ ಸಂಘಟನಾ ಕಾರ್ಯದರ್ಶಿ
ಕೆ ಆರ್ ಎಸ್ ಪಕ್ಷ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top