ಉಡುಪಿ ಬಾಳಿಗ ಆಸ್ಪತ್ರೆಯಲ್ಲಿ ಮತಯಾಚಿಸಿದ ಎನ್ ಡಿ ಎ ಒಕ್ಕೂಟದ ಅಭ್ಯಥಿಗಳು
ಉಡುಪಿ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಬೋಜೆಗೌಡ ಅವರು ಉಡುಪಿಯ ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದರು.
ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಾ ವೈದಕೀಯ ನಿರ್ದೇಶಕರಾದ ಡಾ. ಪಿ. ವಿ ಭಂಡಾರಿ ಅವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಬೆಂಬಲಿಸುವಂತೆ ಮತಯಾಚಿಸಲಾಯಿತು
ಇದೇ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ , ಮಾಜಿಸಚಿವ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






































