ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಕಚೇರಿಯ ನೇರ ಶಾಮೀಲು : ಶಾಸಕ ವಿ.ಸುನೀಲ್ ಕುಮಾರ್
ಕಾರ್ಕಳ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದ ತ್ಯಾಗ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಷ್ಟು ದಿನಗಳ ಕಾಲ ಸಚಿವರ ರಕ್ಷಣೆ ಮಾಡಿದ್ದ ಸಿದ್ದರಾಮಯ್ಯ ಈಗ ಸಿಬಿಐ ಪ್ರವೇಶವಾಗುತ್ತಿದ್ದಂತೆ ನಾಗೇಂದ್ರ ರಾಜೀನಾಮೆ ಪಡೆದುಕೊಂಡಿದ್ದಾರೆ. ಹಾಗಾದರೆ ಇಷ್ಟು ದಿನಗಳ ಕಾಲ ಈ ರಕ್ಷಣೆಯ ನಾಟಕ ಮಾಡಿದ್ದು ಪರಿಶಿಷ್ಟ ವರ್ಗಕ್ಕೆ ಮಾಡಿದ ಅನ್ಯಾಯವಲ್ಲವೇ ?
ಸಿಎಂ ಸಿದ್ದರಾಮಯ್ಯ ಅವರ ಈ ವರ್ತನೆ ಖಂಡಿಸಿ ಸದನದ ಒಳ ಹೊರಗೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಕಚೇರಿಯ ನೇರ ಪಾಲ್ಗೊಳ್ಳುವಿಕೆ ಎಂದು ಅವರು ನೇರ ಆರೋಪಗೈದಿದ್ದಾರೆ.






































