ಮೈಸೂರು: ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಹತ್ಯೆ!
RB NEWS
Bureau Report
ಮೈಸೂರು: ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಹತ್ಯೆ!
ಮೈಸೂರು: ಮೈಸೂರಿನಲ್ಲಿ ಅನ್ನದಾನೇಶ್ವರ ಹಿರಿಯ ಮಠದ ಹಿರಿಯ ಸ್ವಾಮೀಜಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಗೀಡಾದವರುಎಂದು ಗುರುತಿಸಲಾಗಿದೆ.
ಶಿವಾನಂದ ಸ್ವಾಮೀಜಿಗಳು ಸಂಸ್ಕೃತ ಪಾಠ ಶಾಲೆಯ ನಿವೃತ್ತ ಉಪನ್ಯಾಸಕರಾಗಿದ್ದರು. ಸಿದ್ಧಾರ್ಥ ನಗರದ ಬಳಿ ಅನ್ನದಾನೇಶ್ವರ ಮಠ ಸ್ಥಾಪಿಸಿ, ಬಡ ಮಕ್ಕಳಿಗೆ ಸಹಾಯ ಮಾಡುತ್ತಿದ್ದರು.
ಈ ಬಗ್ಗೆ ತನಿಖೆ ನಡೆಸಬೇಕು. ಮಠವು ನಗರದ ಪ್ರಮುಖ ಸ್ಥಳದಲ್ಲಿದ್ದು, ಅದರ ಮೇಲೆ ಕೆಲವು ರಿಯಲ್ ಎಸ್ಟೇಟ್ ವ್ಯಕ್ತಿಗಳ ಕಣ್ಣು ಬಿದ್ದಿತ್ತು. ಜೊತೆಗೆ ಮಠದ ಪಕ್ಕದಲ್ಲೇ ಸರ್ಕಾರಿ ಕೆರೆ ಇದ್ದು, ಅದರ ಉಳಿವಿಗಾಗಿ ಸ್ವಾಮೀಜಿ ಹೋರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
ರವಿ (60) ಎಂಬಾತ ಈ ಕೃತ್ಯ ಎಸಗಿದ್ದು, ಮಲಗಿದ್ದಲ್ಲೇ ಸ್ವಾಮೀಜಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.