‘ಸಿ ಜಿ ಕೆ ರಂಗಪುರಸ್ಕಾರ’ -2024 : ನಟ ನಿರ್ದೇಶಕ ಸಂಘಟಕ ರವಿರಾಜ್ ಎಚ್ ಪಿ ಆಯ್ಕೆ

Picture of RB NEWS

RB NEWS

Bureau Report

ರವಿರಾಜ್ ಎಚ್ ಪಿ ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024


ಇವರು ಕಳೆದ 30 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಟ ನಿರ್ದೇಶಕ ಸಂಘಕರಾಗಿ ಸೇವೆ ಸಲ್ಲಿಸಿರುತ್ತಾರೆ.
ಇವರ ನಟನೆಗೆ ಹಾಗೂ ನಿರ್ದೇಶನಕ್ಕೆ ರಾಜ್ಯಮಟ್ಟದ ಪ್ರಶಸ್ತಿಗಳು ಬಂದಿರುತ್ತದೆ ಹಾಗೂ
ಲಾಕ್ ಡೌನ್ ಸಂದರ್ಭದಲ್ಲಿ ಇವರ ಪರಿಕಲ್ಪನೆಯಲ್ಲಿ ನಡೆಸಿದ ಹೀಗೊಂದು ರಂಗ ಕಲಿಕೆ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿರುತ್ತಾರೆ.
ಹಲವು ಟಿವಿ ಧಾರವಾಹಿ, ಚಲನಚಿತ್ರ ಗಳಲ್ಲಿ ಪೋಷಕ ನಟನಾಗಿ ಪಾತ್ರ ನಿರ್ವಹಿಸಿರುತ್ತಾರೆ.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ಸಂಚಾಲಕರಾಗಿ ಉಡುಪಿ ಜಿಲ್ಲೆಯಲ್ಲಿ ಹಲವಾರು ನಾಟಕ , ಸಾಂಸ್ಕೃತಿಕ ಉತ್ಸವಗಳನ್ನು ಕಳೆದ ಐದು ವರ್ಷಗಳಿಂದ ನಡೆಸಿಕೊಂಡು ಬಂದಿರುತ್ತಾರೆ.
ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನಮ ತುಳುವೆರ್ ಕಲಾ ಸಂಘಟನೆ (ರಿ) ಇದರ ಅಧ್ಯಕ್ಷರಾದ
ಸುಕುಮಾರ್ ಮೋಹನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top