ಪುತ್ತೂರು: ಕೈಚಳಕವನ್ನು ತನ್ನ ದುಡಿಮೆ ಎಂದು ಸಾಧಿಸಿ, ಬಸ್ಸುಗಳಲ್ಲಿ ಪ್ರಯಾಣಿಕರ ಬ್ಯಾಗ್ ಎಗರಿಸುವ ಕಾಯಕದಲ್ಲಿ ಅಂತರ್ ರಾಜ್ಯ ಕಳ್ಳಿಯೊಬ್ಬಳನ್ನು ಪುತ್ತೂರು ಪೊಲೀಸರು ಬಂಧಿಸಿ ಕಳವುಗೈದ ಸುಮಾರು ರೂ. 6 ಲಕ್ಷ ಚಿನ್ನಾಭರಣವನ್ನು ವಶಪಡಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರು ಸಿಕ್ಕಿಲಂಪಳಯಂ ನಿವಾಸಿ ಈಶ್ವರಿ(45) ಬಂಧಿತೆ.
ಬಂಧಿತೆಯಿಂದ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈಕೆ ಪುತ್ತೂರು ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಳೆದ ಒಂದೂವರೆ ತಿಂಗಳ ಹಿಂದೆ ರೇಷ್ಮಾ ಎಂಬ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದಳು.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.






































