[t4b-ticker]

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ

Picture of RB NEWS

RB NEWS

Bureau Report

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಗುರುತಿಕೊಂಡಿರುವ ಜಯಪ್ರಕಾಶ್ ಹೆಗ್ಡೆಯವರು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸದೇ ತಟಸ್ಥ ರಾಗಿದ್ದರು.

ಜಾತ್ಯತೀತ ಜನತಾ ದಳದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಆ ಪಕ್ಷದಿಂದ ಸ್ವರ್ಧಿಸಿ ಸಂಸದರಾಗಿ ಆಯ್ಕೆಗೊಂಡಿದ್ದರು.

ರಾಜಕೀಯ ಗೊಂದಲದ ನಡುವೆ ಕಾಂಗ್ರೆಸ್ ಗೆ ಗುಡ್ ಹೇಳಿದ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಜಾತ್ಯತೀತ ಸಿದ್ಧಾಂತದಲ್ಲಿಯೇ ಬಹುಕಾಲ ರಾಜಕೀಯ ಹಾದಿಯಲ್ಲಿ ಮುನ್ನೆಡೆದ ಜಯಪ್ರಕಾಶ್ ಹೆಗ್ಡೆ ಅವರನ್ನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಪ್ರಯತ್ನ ಗಳು ರಾಜ್ಯ,ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿತ್ತು.

ರಾಜಕೀಯದಲ್ಲಿ ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲದೇ ಇರುವುದರಿಂದ ಅವರಿಗೆ ಕಾಂಗ್ರೆಸ್ ನ ಬಾಗಿಲು ಸದ ತೆರೆದೇ ಇತ್ತು.

ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಸಾಮ್ರಾಜ್ಯ ಮೆರೆಯಬೇಕೆಂಬ ಕನಸುಕಂಡಿರುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೊಸ ಚಿಂತನೆಗಳನ್ನು ಕೈಗೊಂಡಿದ್ದಾರೆ. ಅದರ ಭಾಗವಾಗಿ ಜಯಪ್ರಕಾಶ್ ಹೆಗ್ಡೆಯವರನ್ನು ಮರಳಿ ಕಾಂಗ್ರೆಸ್ ಗೆ ಬರಮಾಡಿಕೊಂಡು ಉಡುಪಿ -ಚಿಕ್ಕಮಗಳೂರು ಸಂಸದರನ್ನಾಗಿ ಆಯ್ಕೆ ಮಾಡಿ ದೆಹಲಿಯ ಸಂಸದ್ ಭವನಕ್ಕೆ ಕಳುಹಿಸುವ ಇಚ್ಚೆಯನ್ನು ಹೊಂದಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top