ಕಾರ್ಕಳ: ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಲೋಕೇಶ ಹಾಸನ ಜಿಲ್ಲೆಯ ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ವರ್ಗಾವಣೆ ಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಆಡಳಿತ) ಸರ್ಕಾರಿ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅದೇಶ ಹೊರಡಿಸಿದ್ದಾರೆ.
ಸಪ್ಪೆಂಬರ್ ೧೦ರಂದು ಈ ಅದೇಶ ಹೊರಡಿಸಿದ್ದು, ಅಧಿಸೂಚನೆಯಂತೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಅದೇಶದವರೆಗೆ ತಿಳಿಸಿರುವ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾವಹಿಸಿ/ಸ್ಥಳ ನಿಯುಕ್ತಿಗೊಳಿಸಲಾಗಿದೆ. ಒಟ್ಟು ೨೧ ಮಂದಿ ಅಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ವರ್ಗಾವಹಿಸಲಾಗಿದೆ ಎಂದು ತಿಳಿದುಬಂದಿದೆ.