ಕಾರ್ಕಳ ಪುರಸಭೆ: ಸಮಬಲದಲ್ಲಿ ಹೋರಾಟದಲ್ಲಿ ವಿಜಯದ ಮಾಲೆ ಬಿಜೆಪಿ ಬಗಲಿಗೆ‌?!

Picture of RB NEWS

RB NEWS

Bureau Report

ಕಾರ್ಕಳ ಪುರಸಭೆ: ಸಮಬಲದಲ್ಲಿ ಹೋರಾಟದಲ್ಲಿ ವಿಜಯದ ಮಾಲೆ ಬಿಜೆಪಿ ಬಗಲಿಗೆ‌?!

ಕಾರ್ಕಳ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ‌.

ಸಾಮಾನ್ಯ ವರ್ಗಕ್ಕೆ ಮೀಸಲಾದ ಹಿನ್ನೆಲೆಯಲ್ಲಿ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷೆ ಸುಮಾ ಕೇಶವ್‌ ಹಾಗೂ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್‌, ಮಾಜಿ ಅಧ್ಯಕ್ಷೆ ಶೋಭಾ ಆರ್‌. ದೇವಾಡಿಗ, ಸ್ಥಾಯೀ ಸಮಿತಿಯ ಮಾಜಿ ಅಧ್ಯಕ್ಷ ಯೋಗೀಶ್‌ ದೇವಾಡಿಗ, ಪ್ರಶಾಂತ ಕೋಟ್ಯಾನ್‌, ಪ್ರದೀಪ್‌ ರಾಣೆ, ಶಶಿಕಲಾ ಶೆಟ್ಟಿ, ಮಮತಾ ಪೂಜಾರಿ, ನೀತಾ ಆಚಾರ್ಯ, ಮೀನಾಕ್ಷಿ ಗಂಗಾಧರ್‌, ಭಾರತಿ ಅಮೀನ್‌ ಇವರೆಲ್ಲರೂ ಅರ್ಹರಾಗುತ್ತಾರೆ.

ಬಿಜೆಪಿಯ 11 ಮಂದಿ ಸದಸ್ಯರ ಪೈಕಿ ಶೋಭಾ ಆರ್‌. ದೇವಾಡಿಗ, ಯೋಗೀಶ್‌ ದೇವಾಡಿಗ, ಶೋಭಾ ಹಿರಿಯ ಸದಸ್ಯರು. 2018ರಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತಾದರೂ ಮೀಸಲಾತಿ ಘೋಷಣೆಯಲ್ಲಿ ವಿಳಂಬವಾಗಿ 2019ರಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿತ್ತು. ಆಗ ಬಿಜೆಪಿಯ ಸುಮಾ ಕೇಶವ್‌ ಅಧ್ಯಕ್ಷರಾಗಿ, ಪಲ್ಲವಿ ಪ್ರವೀಣ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಎರಡೂವರೆ ವರ್ಷ ಆಡಳಿತ ನಡೆಸಿದ್ದರು. ಆ ಬಳಿಕ 15 ತಿಂಗಳಿನಿಂದ ಕುಂದಾಪುರ ಸಹಾಯಕ ಆಯುಕ್ತರು
ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top