ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ರಕ್ಷಿತ್ ಶಿವರಾಂ

Picture of RB NEWS

RB NEWS

Bureau Report

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾ‌ರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸಂಬಂದಿಸಿದ ಕಾರ್ಯಚಟುವಟಿಕೆಗಳು ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನ,ವಿವಿಧ ಚುನಾವಣೆಗಳು ಸದಸ್ಯತ್ವ ನೊಂದಣಿ,ಬೂತ್ ಸಮಿತಿಗಳ ರಚನೆ ಮತ್ತು ನಿರ್ವಹಣೆ,ಹಾಗೂ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುವ ಎಲ್ಲಾ ಕಾರ್ಯಚಟುವಟಿಕೆಗಳನ್ನು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ನಿರ್ವಹಿಸಲು ಜವಾಬ್ದಾರಿ ನೀಡಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top