ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಬಂಧನ ಖಂಡಿಸಿ ಆಮ್ ಆದ್ಮ ಪಕ್ಷ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲವು ಫೋಟೋ ಜರ್ನಲಿಸ್ಟ್ಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.
ಫೋಟೋ ಜರ್ನಲಿಸ್ಟ್ಗಳ ಮೇಲಿನ ಹಲ್ಲೆ ಖಂಡಿಸಿ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಹಾಗೂ ದೆಹಲಿ ಪತ್ರಕರ್ತರ ಸಂಘ ಪ್ರತ್ಯೇಕ ಪ್ರಕಟಣೆಗಳನ್ನು ಹೊರಡಿಸಿದ್ದು, ಹಲ್ಲೆಯನ್ನು ಖಂಡಿಸಿವೆ ಮತ್ತು ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಪೊಲೀಸ್ ಅಧಿಕಾರಿಯೊಬ್ಬ ಫೋಟೊ ಜರ್ನಲಿಸ್ಟ್ ಕುತ್ತಿಗೆ ಹಿಡಿದಿರುವ ಚಿತ್ರವನ್ನು ಪ್ರೆಸ್ ಕ್ಲಬ್ ಹಂಚಿಕೊಂಡಿದೆ.







































