ತಂಡ್ರಕೆರೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿ

Picture of RB NEWS

RB NEWS

Bureau Report

ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಪಡುಮಾರ್ನಾಡು ಗ್ರಾಮದ ತಂಡ್ರಕೆರೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಜನವರಿ 18 ರಂದು ಗ್ರಾಮೀಣ ಸೌಲಭ್ಯಗಳ ವಿಶೇಷ ಮಾಹಿತಿಯನ್ನು ನೀಡಲಾಯಿತು. ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಯವರು ಮಾಹಿತಿಯನ್ನು ನೀಡಿದರು.

ಅವರು ತಮ್ಮ ಭಾಷಣದಲ್ಲಿ ಸರ್ಕಾರದಿಂದ ದೊರಕುವ ಹಲವಾರು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಹಾಗೂ ಮನೆಯವರ ಅಭಿವೃದ್ಧಿ ಮಾಡಿಕೊಳ್ಳಲು ವಿನಂತಿಸಿದರು.

ಪರಿಸರವನ್ನು ಸಂರಕ್ಷಣೆಯಲ್ಲಿ ನಾಗರಿಕರ ಕರ್ತವ್ಯದ ಕುರಿತು ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕಿ ಅರುಣ ಸ್ವಾಗತಿಸಿ, ವಂದಿಸಿದರು.

ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಬಸವನಕಜೆ ಅಂಗನವಾಡಿಯ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಗ್ರಾಮೀಣ ಸೌಲಭ್ಯಗಳ, ಗ್ರಾಹಕ ಸಂಬಂಧಿತ ಸೌಲಭ್ಯಕ್ಕಾಗಿ ದಾಖಲೆಗಳನ್ನು ಇರಿಸಿಕೊಳ್ಳುವ ಅಗತ್ಯಗಳನ್ನು ಉದಾಹರಣೆಯೊಂದಿಗೆ ಮನವರಿಕೆ ಮಾಡಿಕೊಡಲಾಯಿತು. ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಯವರು ಮಾಹಿತಿ ಕಾರ್ಯಕ್ರಮ ನಡೆಸಿಕೊಟ್ಟರು.

ಸ್ತ್ರೀ ಶಕ್ತಿ ತಂಡದ ಮುಖ್ಯಸ್ಥೆ ಫ್ಲೇವಿ ವಂದಿಸಿದರು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top