ತಲೆ ಮರೆಸಿಕೊಂಡಿದ್ದ ರಾಜೇಶ್ ಸುವರ್ಣ ಬಂಧನ

Picture of RB NEWS

RB NEWS

Bureau Report

ಮಂಗಳೂರು : ಕಳೆದ ಏಳುವರ್ಷಗಳಿಂದ ನ್ಯಾಯಾಲಯದ ವಿಚಾರಣೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಉಳ್ಳಾಲ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ ಪೊಲೀಸ್ ತಂಡ ಬಂಧಿಸಿದೆ.

ಹರೇಕಳ ಕಡವಿನ ಬಳಿ ಬಳಿಯಿರುವ ಎನ್ .ಎಫ್ ಜನರಲ್ ಸ್ಟೋರ್ ಮಾಲೀಕ ಅಬ್ದುಲ್ ರಹಿಮಾನ್ ಎಂಬವರ ಮೇಲೆ 2017ರ ಮೇ.24 ರಂದು ರಿಕ್ಷಾದಲ್ಲಿ ಬಂದಿದ್ದ ಅಶ್ರಫ್ ಮತ್ತು ಮೂವರು ಸೇರಿಕೊಂಡು ರಾತ್ರಿ 10ಕ್ಕೆ ಅಂಗಡಿಯೊಳಕ್ಕೆ ನುಗ್ಗಿ ಅವಾಚ್ಯವಾಗಿ ಬೈದು, ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದರು. ಅಲ್ಲದೆ ಕ್ಯಾಷಿನಲ್ಲಿದ್ದ ರೂ.50,000 ವ್ಯಾಪಾರದ ಹಣವನ್ನು ದರೋಡೆ ನಡೆಸಿದ್ದರು. ಈ ಸಂಬಂಧಿತ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ರಾಜೇಶ್ ಹಾಗೂ ಇನ್ನೋರ್ವನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅಶ್ರಫ್ ಹಾಗೂ ಇನ್ನೋರ್ವನನ್ನು ಪೊಲೀಸರು ಅಂದೇ ಬಂಧಿಸಿದ್ದು, ಇದೀಗ ಏಳು ವರ್ಷಗಳ ನಂತರ ಪ್ರಕರಣ ಸಂಬಂಧ ರಾಜೇಶನ ಬಂಧನವಾಗಿದೆ. ಆರೋಪಿಗಳ ವಿರುದ್ಧ 120(ಬಿ), 448,307,394,504 ಜೊತೆಗೆ 34 ಐಪಿಸಿ ಮತ್ತು 25(ಬಿ) ಆರ್ಮ್ಸ್ ಕಾಯಿದೆಯಡಿ ಪ್ರಕರಣ ದಾಖಲಾಗಿದೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top