ಧರ್ಮಯೋಗಿ ಮೋಹನ ಸ್ವಾಮೀಜಿಯವರ 4ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ಶ್ರೀ ಶ್ರೀ ಶ್ರೀ ವಿನಯ ಗುರೂಜಿ

Picture of RB NEWS

RB NEWS

Bureau Report

ಹೆಬ್ರಿ: ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮುದ್ರಾಡಿ ಹಾಗೂ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ಜುಲಾಯಿ 8ರಂದು ಜರಗಲಿರುವ ಧರ್ಮಯೋಗಿ ಮೋಹನ ಸ್ವಾಮೀಜಿಯವರ ನಾಲ್ಕನೇ ವರ್ಷದ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ವಿನಯ ಗುರೂಜಿರವರು ಪಾಲ್ಗೊಳ್ಳಲಿದ್ದಾರೆ.

ಚಿಕ್ಕಮಗಳೂರಿನ ಪರಮಪೂಜ್ಯ ಶ್ರೀ ಶ್ರೀ ಶ್ರೀ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಇವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು.

ಬೆಳಿಗ್ಗೆ 9.30ಕ್ಕೆ ಪಟ್ಲ ಸತೀಶ್ ಶೆಟ್ಟಿ ಮತ್ತು ಬಳಗದವರಿಂದ ಯಕ್ಷಗಾನ ತಾಳ ಮದ್ದಳೆ “ಅಂಗದ ಸಂಧಾನ” ಜರುಗಲಿದ್ದು, ಕಲಾವಿದರಾಗಿ ಉಜಿರೆ ಅಶೋಕ್ ಭಟ್, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 12.00 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ರವೀಂದ್ರ ಶೆಟ್ಟಿ ಬಜಗೋಳಿ ವಹಿಸಲಿದ್ದಾರೆ.
ಧರ್ಮಯೋಗಿ ವಿನಯಯೋಗಿ ಗುರೂಜಿರವರನ್ನು ಸನ್ಮಾನಿಸಲಾಗುವುದು.
ಕಮಲ ಎಂ.ಸಿ ಉಪಸ್ಥಿತರಿರುವರು. ಮುದ್ರಾಡಿ ಮಂಜುನಾಥ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top