ಬಂಟ್ವಾಳ: ಬಸ್ನಲ್ಲಿ ಕಳ್ಳತನ ಮಾಡಿದ ಆರೋಪಿ ಬಂಧನ – 20 ಲಕ್ಷ ಮೌಲ್ಯದ ಚಿನ್ನಾಭರಣ ವಶ
RB NEWS
Bureau Report
ಬಂಟ್ವಾಳ: ಬಸ್ನಲ್ಲಿ ಕಳ್ಳತನ ಮಾಡಿದ ಆರೋಪಿ ಬಂಧನ – 20 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಬಂಟ್ವಾಳ : ಬಾಳ್ತಿಲ ಗ್ರಾಮದ ಸಮುದ್ರ ಹೋಟೆಲ್ ಸಮೀಪ ನಿಲ್ಲಿಸಿದ್ದ ಶ್ರೀ ದುರ್ಗಾಂಬಾ ಬಸ್ನಲ್ಲಿ ಬ್ರಹ್ಮಾವರ ಮೂಲದ ದಂಪತಿಗಳ ಬ್ಯಾಗ್ನಲ್ಲಿದ್ದ ಸುಮಾರು 170ರಿಂದ 180 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 132/2025, ಕಲಂ 303(2) BNS ಅಡಿಯಲ್ಲಿ ದಿನಾಂಕ 19.11.2025ರಂದು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯನ್ನು ಮಧ್ಯಪ್ರದೇಶ ರಾಜ್ಯದ ಧಾರ್ ಜಿಲ್ಲೆಯ ಧರಂಪುರಿ ತಾಲ್ಲೂಕಿನ ಆಜಾದ್ ಮಾರ್ಗ, ವಾರ್ಡ್ ನಂ.2 ನಿವಾಸಿಯಾದ ಸಮದ್ ಖಾನ್ (37) ಎಂದು ಗುರುತಿಸಲಾಗಿದೆ. ಡಾ. ಅರುಣ್ ಕೆ., ಐಪಿಎಸ್ ಪೊಲೀಸ್ ಅಧೀಕ್ಷಕರು ಹಾಗೂ ಅನಿಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ ಇವರ ಮಾರ್ಗದರ್ಶನದಲ್ಲಿ ಮತ್ತು ಯಶ್ ಕುಮಾರ್ ಶರ್ಮಾ, ಐಪಿಎಸ್ ಸಹಾಯಕ ಪೊಲೀಸ್ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ಇವರ ನಿರ್ದೇಶನದಂತೆ ಕಾರ್ಯಾಚರಣೆ ಕೈಗೊಳ್ಳಲಾಯಿತು. ಮಧ್ಯಪ್ರದೇಶ ರಾಜ್ಯದ ಧಾರ್ ಜಿಲ್ಲೆಯ ಹಿರಿಯ ಪೊಲೀಸ್ ಅಧೀಕ್ಷಕ ಮಯಾಂಕ್ ಅವಸ್ತಿ, ಐಪಿಎಸ್ ಹಾಗೂ ಧಾರ್ ನಗರ ಪೊಲೀಸ್ ಅಧೀಕ್ಷಕ ಸುಜಾವಲಾ ಜಗ್ಗ, ಐಪಿಎಸ್ ಮತ್ತು ಧಾರ್ ಸೈಬರ್ ಕ್ರೈಂ ಪಿಎಸ್ಐ ಪ್ರಶಾಂತ್ ಹಾಗೂ ಸಿಬ್ಬಂದಿಗಳ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ತನಿಖಾಧಿಕಾರಿ ಅನಂತ ಪದ್ಮನಾಭ ಕೆ.ವಿ., ಪೊಲೀಸ್ ನಿರೀಕ್ಷಕರು, ಬಂಟ್ವಾಳ ನಗರ ಪೊಲೀಸ್ ಠಾಣೆ ಅವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿ, ಆರೋಪಿತನಿಂದ ಕಳ್ಳತನ ಮಾಡಿದ್ದ ಸುಮಾರು 174 ಗ್ರಾಂ ತೂಕದ ಅಂದಾಜು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹೆಚ್.ಸಿ ವಿಜಯ್ ಕುಮಾರ್, ಹೆಚ್.ಸಿ ರಾಜೇಶ್, ಹೆಚ್.ಸಿ ಇರ್ಷಾದ್, ಪಿ.ಸಿ ಬಸವರಾಜ, ಹೆಚ್.ಸಿ ಸುರೇಶ್ ಕುಮಾರ್, ಸಿ.ಪಿ.ಸಿ ವಿಜಯ್ ಕುಮಾರ್ ಹಾಗೂ ಮಪಿಸಿ ರೇವತಿ ಅವರುಗಳು ಭಾಗವಹಿಸಿದ್ದರು. ಇದಲ್ಲದೆ ನಂದ ಕುಮಾರ್, ಪೊಲೀಸ್ ನಿರೀಕ್ಷಕರು, ಡಿಎಸ್ ಘಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪೊಲೀಸ್ ಘಟಕದ ಗಣಕಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಕುಮಾರ್ ಮತ್ತು ದಿವಾಕರ್ ಅವರುಗಳು ಕಾರ್ಯಾಚರಣೆಗೆ ಸಹಕರಿಸಿದ್ದರು.