ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Picture of RB NEWS

RB NEWS

Bureau Report

ಕಾರ್ಕಳ : ನಿಟ್ಟೆ ಗ್ರಾಮದ ಬೋರ್ಕಲ್ಲು ಗುಡ್ಡೆ ಪ್ರದೇಶದಲ್ಲಿರುವ ಕರಿಯ ಪೂಜಾರಿ ಅವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಇಂದು ಬೆಳಿಗ್ಗೆ ಬಂದ ಮಾಹಿತಿಯ ಮೇರೆಗೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ತಂಡ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು. ಉಪಾರಣ್ಯ ಸಂರಕ್ಷಣಾಧಿಕಾರಿಗಳಾದ ಕುಂದಾಪುರ ಶ್ರೀ ರುತ್ರನ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೂಡುಬಿದರೆ ಪಿ. ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.
ಕಾರ್ಕಳ ವಲಯದ ಉಪವಲಯ ಅರಣ್ಯಾಧಿಕಾರಿಗಳಾದ ಹುಕ್ರಪ್ಪ, ಚಂದ್ರಕಾಂತ್ ಕರುಣಾಕರ್, ಗಸ್ತು ಅರಣ್ಯಪಾಲಕರಾದ ಸುರೇಶ್, ಪ್ರಕಾಶ್, ಶ್ರೀಧರ್, ಯಮನೂರು, ಅರಣ್ಯ ವೀಕ್ಷಕ ಮಂಜುನಾಥ್, ವಾಹನ ಚಾಲಕ ವಿತೇಶ್ ಸೇರಿದಂತೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ಚಿರತೆಯನ್ನು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಮೇಲಕ್ಕೆತ್ತಿದರು.
ರಕ್ಷಿಸಲ್ಪಟ್ಟ ಚಿರತೆ ಸುಮಾರು ಒಂದು ವರ್ಷದ ಪ್ರಾಯದ ಗಂಡು ಎಂದು ಅಂದಾಜಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸ್ಥಳೀಯ ನಿವಾಸಿಗಳ ಸಹಕಾರ ಪ್ರಮುಖವಾಗಿದೆ.
ಅರಣ್ಯ ಇಲಾಖೆ ಸಾರ್ವಜನಿಕರು ಇಂತಹ ಘಟನೆಗಳು ಕಂಡುಬಂದಾಗ ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top