ಶಿವಮೊಗ್ಗ : ಭಾರತೀಯ ಜನತಾ ಪಾರ್ಟಿ ರಾಜ್ಯಧ್ಯಕ್ಷ ಅವರ ತವರು ಜಿಲ್ಲೆಯಾಗಿರುವ ಶಿವಮೊಗ್ಗದಲ್ಲಿ ಬಂಡಾಯದ ರಣಕಹಳೆ ಜೋರಾಗಿ ಕೇಳಿ ಬರುತ್ತಿದೆ.
ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ತಂದೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶಿತಭರಿತರಾಗಿದ್ದು, ಶಿವಮೊಗ್ಗ ಲೋಕಸಬಾ ಕ್ಷೇತ್ರದಿಂದಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಕ್ತಿಪ್ರದರ್ಶನ ಮಾಡುವುದಾಗಿ ಘಂಟಾಘೋಷವಾಗಿ ಸಾರಿದ್ದಾರೆ.
ಕಣ ಕಣಗಳಲ್ಲಿ ಬಿಜೆಪಿಯದೇ ಮಂತ್ರ!
ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಈಶ್ವರಪ್ಪ ಅವರು, ನಾನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತೇನೆ. ಗೆದ್ದ ಎರಡು ತಿಂಗಳಿನಲ್ಲಿ ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತೇನೆ ಎಂದರು.
ಇನ್ನು ಹಿಂದುತ್ವದ ಪರ ಮಾತನಾಡುವ ಪ್ರತಾಪ್ ಸಿಂಹ, ಸಿ.ಟಿ.ರವಿ, ಸದಾನಂದಗೌಡ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪಿಸಿದರು. ಯಡಿಯೂರಪ್ಪನವರು ತಮಗೆ ಬೇಕಾದವರಿಗೆ ಮಾತ್ರ ಟಿಕೆಟ್ ನೀಡಿದ್ದಾರೆ. ಅವರು ಟಿಕೆಟ್ ನೀಡಿದ ಅಭ್ಯರ್ಥಿಗಳು ಸೋತರೆ ಅದಕ್ಕೆ ಯಡಿಯೂರಪ್ಪ ಅವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ






































