ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಮಾಜಿ ಸಂಸದರಾದ ಎಸ್. ಶಿವರಾಮನಗೌಡ, ಮಾಜಿ ಕ್ರಿಕೆಟಿಗ ದೊಡ್ಡಗಣೇಶ್, ಮುಖಂಡರಾದ ಹರ್ಷ ಗೌಡ, ಗಾಯತ್ರಿ ಜಿ. ತಿಮ್ಮಾರೆಡ್ಡಿ ಗೌಡ, ಶ್ರೀನಿವಾಸ್, ತುಕಾರಾಮ್ ಗೌಡ ಸೇರಿದಂತೆ ಅವರ ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು.


ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಡಿ. ವಿ. ಸದಾನಂದ ಗೌಡ, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾ ಮೋಹನ್ದಾಸ್ ಅಗರ್ವಾಲ್, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಸಿ. ಟಿ. ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ. ವಿ., ಪ್ರಮುಖರಾದ ಜನಾರ್ಧನ್ ರೆಡ್ಡಿ, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.






































