ಬಿಜೆಪಿಯಲ್ಲಿ ನಳಿನ್ ಕುಮಾರ್ ಗೆ ಪ್ರಮುಖ ಸ್ಥಾನಮಾನ ಸಿಗಲಿ! ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಸನ್ನಿದ್ಧಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಪ್ರಾರ್ಥನೆ
RB NEWS
Bureau Report
ಬಿಜೆಪಿಯಲ್ಲಿ ನಳಿನ್ ಕುಮಾರ್ ಗೆ ಪ್ರಮುಖ ಸ್ಥಾನಮಾನ ಸಿಗಲಿ! ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಸನ್ನಿದ್ಧಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಪ್ರಾರ್ಥನೆ
ಕಾಸರಗೋಡು: ನಳಿನ್ ಕುಮಾರ್ ಕಟೀಲ್ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಕರ್ನಾಟಕ ಹಾಗೂ ಕೇರಳ ರಾಜ್ಯ ಗಡಿಭಾಗದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ಸಭಾ ಕಾರ್ಯಕ್ರಮ ಉದ್ದೇಶಿಸಿ ಮಾತಮಾಡಿರುವುದು ನೆರದ ಭಕ್ತ ಸಮೂಹವನ್ನೇ ನಿಬ್ಬೇರಗಾಗುವಂತೆ ಮಾಡಿತು.
ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು.
ಈ ವೇಳೆ ನಳಿನ್ ಕುಮಾರ್ ಪರ ಡಿಕೆಶಿ ಬ್ಯಾಟಿಂಗ್ ಮಾಡಿ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ನಳಿನ್ ಕುಮಾರ್ ಕಟೀಲು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಈಗ ನಾವು ಮಧೂರು ಮಹಾಗಣಪತಿಯ ಸನ್ನಿಧಿಯಲ್ಲಿ ಒಂದೇ ವೇದಿಕೆಯಲ್ಲಿ ಅಕ್ಕ ಪಕ್ಕ ಇದ್ದೇವೆ. ರಾಜಕೀಯದಲ್ಲಿ ಅಧಿಕಾರ, ಹುದ್ದೆ ಶಾಶ್ವತವಲ್ಲ. ಅವರು ಮಧೂರು ಸಿದ್ಧಿವಿನಾಯಕನ ಅನುಗ್ರಹದಿಂದ ಮತ್ತೆ ರಾಜ್ಯಾಧ್ಯಕ್ಷನಾಗಲಿ, ಮಾಜಿ ಆಗದೇ ಇರಲಿ ಎಂದು ಶುಭಹಾರೈಸಿದರು.