ಭುವನೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Picture of RB NEWS

RB NEWS

Bureau Report

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಸ್. ವಿ. ಎಸ್ ಪದವಿ ಪೂರ್ವ ಕಾಲೇಜು, ಗಂಗೊಳ್ಳಿಯ ಜಂಟಿ ಆಶ್ರಯದಲ್ಲಿ 2024 ಸೆ. 21 ರಂದು ನಡೆದ ಜಿಲ್ಲಾಮಟ್ಟದ ಹುಡುಗರ ಮತ್ತು ಹುಡುಗಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದಿರುತ್ತದೆ.

ಇವರ ಸಾಧನೆಗೆ ಶ್ರೀ ಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಹಾಗು ಅಧ್ಯಾಪಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಜಿಲ್ಲಾಮಟ್ಟದ ಹುಡುಗರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ನಿಶಾಂತ್, ಸೂರಜ್ ಮತ್ತು ಸುಮನ್ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಕಾಂತೇಶ ಮತ್ತು ನಿಶಾನ್ ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಚಂದ್ರ ತರಬೇತಿಯನ್ನು ನೀಡಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top