ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನ
RB NEWS
Bureau Report
ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನ
ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರ ಜೇಷ್ಠತೆ ಮೇರೆಗೆ ಮುಂದಿನ ಒಂದು ವರ್ಷದ ಅವಧಿಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.