ಮಣಿಪಾಲ ಜ್ಞಾನಸುಧಾ : ಪ್ರತಿಭಾ ಕಾರಂಜಿಯಲ್ಲಿ ತನ್ಮಯಿ ಆರ್. ಆರಾಧ್ಯ ರಾಜ್ಯಮಟ್ಟಕ್ಕೆ

Picture of RB NEWS

RB NEWS

Bureau Report

ಮಣಿಪಾಲ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಜನವರಿ ೨ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತನ್ಮಯಿ ಆರ್. ಆರಾಧ್ಯ ಭರತನಾಟ್ಯದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರದ ಎಂ. ರಾಜಶೇಖರ ಹಾಗೂ ಕಲ್ಪನಾ ಆರ್ ದಂಪತಿಯ ಸುಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.)ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top