ಉಳ್ಳಾಲ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ತೊಕ್ಕೊಟ್ಟಿನಲ್ಲಿ ಗುರುವಾರ ಬಿಜೆಪಿ ನಡೆಸಿದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.





ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದ್ದು, ಅದರಂತೆ ತೊಕ್ಕೊಟ್ಟಿನಲ್ಲಿ ರಸ್ತೆ ತಡೆದು ಪ್ರತಿಭಟಿಸಲು ಮುಂದಾದ ಬಿಜೆಪಿ ಮಂಗಳೂರು ಮಂಡಲದ ಯುವ ಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆಯನ್ನು ರಸ್ತೆಯಿಂದ ಬದಿಗೆ ತೆರಳುವಂತೆ ಉಳ್ಳಾಲ ಠಾಣಾ ಇನ್ ಸ್ಪೆಕ್ಟರ್ ಎಚ್.ಎನ್.ಬಾಲಕೃಷ್ಣ ಸೂಚಿಸಿ ತರಾಟೆಗೈದರೆನ್ನಲಾಗಿದೆ.
ಇದರಿಂದ ಆಕ್ರೋಶ ಗೊಂಡ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಕೆಲಹೊತ್ತು ತೀವ್ರ ವಾಗ್ವಾದ ನಡೆದ ಪ್ರಸಂಗವೂ ನಡೆದಿತ್ತು.






































