ಮಲ್ಪೆ ಘಟನೆ : ದಿಗ್ಭ್ರಮೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

Picture of RB NEWS

RB NEWS

Bureau Report

ಬೆಂಗಳೂರು : ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌
ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ಮುಖ್ಯಮಂತ್ರಿ ದಿಗ್ಭ್ರಮೆಗೊಂಡಿದ್ದಾರೆ.

ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು ಎಂದಿದ್ದಾರೆ.

ಇಂತಹ ಅನಾಗರಿಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ ಎಂದು ಎಚ್ಚರಿಸಿದ್ದಾರೆ.

ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ.

ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ಧ ರಾಮಯ್ಯ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top