ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಎಲ್ಲಾ ಇಲಾಖೆಗಳು ಸಜ್ಜಾಗಿರಬೇಕು :ಶಾಸಕ ವಿ. ಸುನಿಲ್ ಕುಮಾರ್

Picture of RB NEWS

RB NEWS

Bureau Report

ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಎಲ್ಲಾ ಇಲಾಖೆಗಳು ಸಜ್ಜಾಗಿರಬೇಕು :ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪದ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನಾ ಸಭೆ ಜರುಗಿತು.

ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಇಲಾಖೆಯ ಅಧಿಕಾರಿಗಳಿಂದ ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪದ ಕುರಿತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯನ್ನು ಪಡೆದರು.

ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಎಲ್ಲಾ ಇಲಾಖೆಗಳು ಸಜ್ಜಾಗಿರಬೇಕು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸಲು ಹಾಗೂ ಮಳೆಗಾಲದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲು ಸೂಚಿಸಿದರು.

ಕಾರ್ಕಳ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಗುರುದತ್ ಎಂ.ಎನ್, ಹೆಬ್ರಿ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕೆ.ಜಿ. ಕಾರ್ಕಳ ತಾಲೂಕು ತಹಶೀಲ್ದಾರ ನರಸಪ್ಪ, ಹೆಬ್ರಿ ತಾಲೂಕು ತಹಶೀಲ್ದಾರ ಎಸ್ ಎ ಪ್ರಸಾದ್ , ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ, ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top