ಮಾಚ್೯ 10ರಂದು ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ

Picture of RB NEWS

RB NEWS

Bureau Report

ಉಡುಪಿ : ಉಡುಪಿ ಎಂಜಿಎಂ ಗ್ರೌಂಡ್ ನಲ್ಲಿ ಮಾಚ್೯ 10ರಂದು ಉಡುಪಿ
ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ನಡೆಯಲಿದೆ.

ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.

ಇದರ ಹಿನ್ನಲ್ಲೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶವು ಮಾ.10ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಎಮ್ ಜಿ ಎಮ್ ಮೈದಾನದಲ್ಲಿ ಜರಗಲಿದೆ.

ಅಧಿಕಾರಕ್ಕೆ ಬಂದ ದಿನದಿಂದಲೂ ಗ್ಯಾರಂಟಿ ಯೋಜನೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರವು ಜತೆಗೆ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಪ್ರಾದೇಶಿಕ ಅಭಿವೃದ್ಧಿಯ ವಿಷಯಗಳಿಗೆ ಆದ್ಯತೆ ನೀಡಿದೆ. ಈ ಬೃಹತ್ ಸಮಾವೇಶದಲ್ಲಿ ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿರುವರು ಎಂದು
ಮುನಿಯಾಲು ಉದಯಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top