ರಾಜ್ಯಪಾಲ ಮುಹಮ್ಮದ್ ಆರೀಫ್ ಖಾನ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

Picture of RB NEWS

RB NEWS

Bureau Report

ಉಡುಪಿ: ಕೇರಳ ರಾಜ್ಯಪಾಲ ಮುಹಮ್ಮದ್ ಆರೀಫ್ ಖಾನ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಬಳಿಕ ಪರ್ಯಾಯ ಶ್ರೀಪುತ್ತಿಗೆ ಮಠ, ಶ್ರೀಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀಕೃಷ್ಣ ಮಾಸೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ದೇವರಿಗೆ ಯಾವ ಭಾಷೆಯಲ್ಲಿ ಪ್ರಾರ್ಥನೆ ಮಾಡುತ್ತೇವೆ ಎನ್ನುವುದಕ್ಕಿಂತ ಯಾವ ಭಾವದಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ ಎಂಬುದು ಮುಖ್ಯವಾಗುತ್ತದೆ. ವೈವಿಧ್ಯತೆ ನಮ್ಮ ಪ್ರಕೃತಿಯ ನಿಯಮ. ಈ ವೈವಿಧ್ಯತೆ ಯಿಂದಲೇ ನಾವೆಲ್ಲರೂ ಸುಖಕರವಾಗಿರುವುದಕ್ಕೆ ಸಾಧ್ಯ ಎಂದರು.

ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇಂದ್ರ ಸ್ವಾಮಿ ಮಾತನಾಡಿ, ಸಂಸ್ಕೃತ ಭಾಷೆ ಗೊತ್ತಿಲ್ಲದಿದ್ದರೆ ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಸ್ವರ್ಗಕ್ಕೆ ಹೋಗಬಯಸುವವರು ಎಲ್ಲರೂ ಸಂಸ್ಕೃತ ಭಾಷೆಯನ್ನು ಕಲಿಯ ಬೇಕು. ಇದು ಪವಿತ್ರ, ಪಾವನ ಮತ್ತು ಶ್ರೇಷ್ಠವಾಗಿರುವ ಭಾಷೆ ಎಂದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top