ವಯನಾಡ್ ಲೋಕಸಭಾ : ರಾಹುಲ್ ಗಾಂಧಿ v/s ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್

Picture of RB NEWS

RB NEWS

Bureau Report

  • ತಿರುವನಂತಪುರಂ: ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಕಣಕ್ಕಿಳಿಯಲಿದ್ದಾರೆ.

ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿಯ ಸುರೇಂದ್ರನ್ ಸ್ಪರ್ಧೆ:

ಸಾಂಪ್ರದಾಯಿಕ ಕಾಂಗ್ರೆಸ್ ಭದ್ರಕೋಟೆಯಾಗಿರುವ ವಯನಾಡಿನಲ್ಲಿ ಸುರೇಂದ್ರನ್ ಅವರಿಗೆ ಅನಿರೀಕ್ಷಿತ ಟಿಕೆಟ್ ನೀಡುವ ಮೂಲಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಬಿಜೆಪಿ ತನ್ನ ಎದುರಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ರಣತಂತ್ರ ರೂಪಿಸಿದೆ. ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ವರ್ಷಗಳ ಹಿಂದೆ ಶಬರಿಮಲೆಗೆ ಯುವತಿಯರ ಪ್ರವೇಶದ ವಿರುದ್ಧ ಕೇಸರಿ ಪಕ್ಷದ ತೀವ್ರ ಆಕ್ಷೇಪ ವ್ಯಕ್ತಪಡಿಸಿದವರಲ್ಲಿ ಸುರೇಂದ್ರನ್ ಒಬ್ಬರು.

2020ರಿಂದ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತೀಯ ಜನತಾ ಯುವ ಮೋರ್ಚಾದ ವಯನಾಡ್‌ ಜಿಲ್ಲಾಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ಇವರು, ಕೋಝಿಕೋಡ್ ಜಿಲ್ಲೆಯ ಉಲ್ಲೆಯೇರಿಯಿಂದ ಬಂದ ಕುನ್ನುಮ್ಮೆಲ್ ಸುರೇಂದ್ರನ್ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಪತ್ತನಂತಿಟ್ಟದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಅದೇ ವರ್ಷ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಕೊಣ್ಣಿಯಿಂದ ಕಣಕ್ಕಿಳಿದಿದ್ದದರು. ಆದ್ರೆ ಗೆಲವು ಸಾಧಿಸಲಿಲ್ಲ.

ಕೇಂದ್ರ ಸಚಿವ ವಿ. ಮುರಳೀಧರನ್ ಅವರ ನಿಕಟವರ್ತಿ ಎಂದು ಕರೆಯಲ್ಪಡುವ ಸುರೇಂದ್ರನ್ ಅವರು 2016 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರಂ ಕ್ಷೇತ್ರದಲ್ಲಿ ಕೇವಲ 89 ಮತಗಳಿಂದ ಸೋಲು ಕಂಡಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top