ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’

Picture of RB NEWS

RB NEWS

Bureau Report

ಕಾರ್ಕಳ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ ೨೩ ರಿಂದ ಏಪ್ರಿಲ್ ೨೯ ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ.ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ ೧೦ ರಿಂದ ೫೦ ವರೆಗೆ ಶೇಕಡಾ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ ಖರೀದಿಯೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ.
ಈ ಒಂದು ಕಾರ್ಯಕ್ರಮದಲ್ಲಿ ಎಲ್ಲ ಮಾಧ್ಯಮ ಮಿತ್ರರು ಪಾಲ್ಗೊಂಡು ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಮಲ್ಲಿ ಕೇಳಿಕೊಳ್ಳುತಿದ್ದೇವೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top