ಶಾಸಕ ವಿ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆ

Picture of RB NEWS

RB NEWS

Bureau Report

6 ಕೋಟಿ ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ನಾಳೆ ಲೋಕಾರ್ಪಣೆ


ಕಾರ್ಕಳ: ಹಿಂದುಳಿದ ವರ್ಗಗಳ ಸೌಲಭ್ಯಕ್ಕಾಗಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಭವನವು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಫೆಬ್ರವರಿ 25ರಂದು ನಡೆಯಲಿರುವ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಭವನವನ್ನು ಉದ್ಘಾಟಿಸಲಿದ್ದಾರೆ.
ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಈ ಭವನವು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ವಿಶೇಷ ಸಹಕಾರದಿಂದ ರೂಪುಗೊಂಡಿದೆ. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಭವ್ಯ ಹಾಗೂ ಸುಸಜ್ಜಿತವಾಗಿ ನಿರ್ಮಾಣಗೊಂಡ ಈ ಭವನದ ಗುದ್ದಲಿ ಪೂಜೆ ಸಂದರ್ಭದಲ್ಲಿ ಪಕ್ಷಭೇದ ಮರೆತು ಸುಮಾರು 3,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
ಭವನದಲ್ಲಿ ವಿಶಾಲ ಸಭಾಂಗಣ, ಊಟದ ಹಾಲ್ ಹಾಗೂ 10 ವಿಶ್ರಾಂತಿ ಕೊಠಡಿಗಳ ವ್ಯವಸ್ಥೆ ಕಲ್ಪಿಸಲಾಗಿದೆ. ತಾಲೂಕು ಕೇಂದ್ರಗಳಲ್ಲಿ ಇಷ್ಟೊಂದು ಮೊತ್ತದಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಭವನ ಕಾರ್ಕಳದಲ್ಲೇ ಇರುವುದಾಗಿ ಹೇಳಲಾಗಿದೆ.
ಈ ಯೋಜನೆಯನ್ನು ಜನತೆಗೆ ನೀಡಿದ ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಹಾಗೂ ಅಂದಿನ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಎಸ್.ಸಿ. ಮೋರ್ಚಾ ವತಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.
ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉಡುಪಿ ಜಿಲ್ಲಾ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ

ಶ್ರೀನಿವಾಸ ಕಾರ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top