ಸಾಧಕ ವಿದ್ಯಾರ್ಥಿಗಳಿಗೆ ಗೌರವ ಸಂದಾಯ
ಕಾರ್ಕಳ : ಬೈಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ 2024 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ 45 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.
ಇದರೊಂದಿಗೆ ವಿಷಯವಾರು ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಚೇತಾ ರವರು ಸನ್ಮಾನಿತ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಮೂಡಲಿ, ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ‘ಈ ಕಾರ್ಯಕ್ರಮ’ ಪ್ರೇರಣೆಯಾಗಬೇಕೆಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಗುರುಮೂರ್ತಿ ತಾಮ್ರಗೌರಿ ಯವರು ವಹಿಸಿದ್ದರು.
ಸನ್ಮಾನಿತ ವಿದ್ಯಾರ್ಥಿಗಳ ಪಟ್ಟಿಯನ್ನು ಉಪನ್ಯಾಸಕ ರತ್ನಾಕರ ಪೂಜಾರಿ ವಾಚಿಸಿದರು. ವಿದ್ಯಾರ್ಥಿ ಸಂಘದ ಸಂಚಾಲಕ ನರಸಿಂಹ ವರ್ಧನ್ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಹಿರಿಯ ಉಪನ್ಯಾಸಕರಾದ ಸೀತಾರಾಮ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಉಪನ್ಯಾಸಕ ಮಹೇಶ್ ವಂದನಾರ್ಪಣೆಗೈದರು.





















