[t4b-ticker]

ಹರ್ಯಾಣ ರಾಜಕೀಯದಲ್ಲಿ ಗಡ ಗಡ: ಮುಖ್ಯಮಂತ್ರಿ ರಾಜೀನಾಮೆ!

Picture of RB NEWS

RB NEWS

Bureau Report

ಚಂಡೀಗಢ : ಹಠಾತ್ ರಾಜಕೀಯ ಬದಲಾವಣೆಯಲ್ಲಿ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ.

ರಾಜ್ಯಪಾಲ ಬಂಡಾರು ದತ್ತಾತ್ರೇ ಯ ಅವರಿಗೆ ಖಟ್ಟರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಖಟ್ಟರ್ ಜೊತೆ ಸಚಿವ ಸಂಪುಟದ ಎಲ್ಲ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.

ಲೋಕಸಭೆ ಚುನಾವಣೆಗೆ ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ಜೊತೆಗಿನ ಸೀಟು ಹಂಚಿಕೆಯಲ್ಲಿ ಒಮ್ಮತ ಮೂಡದ ಕಾರಣ ಮೈತ್ರಿ ಮುರಿದುಬಿದ್ದಿದೆ ಎಂಬ ವದಂತಿಗಳ ಬೆನ್ನಲ್ಲೇ ಇದೀಗ ಖಟ್ಟರ್ ರಾಜೀನಾಮೆ ನೀಡಿದ್ದಾರೆ.90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 40 ಶಾಸಕರ ಬಲಹೊಂದಿರುವ ಬಿಜೆಪಿ, ಪಕ್ಷೇತರ ಶಾಸಕರ ಬೆಂಬಲ ಪಡೆದು ಸರ್ಕಾರ ರಚಿಸುತ್ತಾರೆ ತಿಳಿದು ಬಂದಿದೆ.

10 ಜೆಜೆಪಿ , 7 ಮಂದಿ ಪಕ್ಷೇತರ ಶಾಸಕರಿದ್ದಾರೆ. ಪ್ರತಿ ಪಕ್ಷ ಕಾಂಗ್ರೆಸ್ 30 ಶಾಸಕರಿದ್ದಾರೆ. ಸದ್ಯ, ಶಾಸಕರ ಸಭೆ ಕರೆದಿರುವ ಬಿಜೆಪಿ, ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top